LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

ಮತದಾನ ಮಾಡಲು ಅಮೇರಿಕೆಯಿಂದ ಬಂದಿದ್ದ ವ್ಯಕ್ತಿಯ ಹೆಸರೇ ಮತದಾರರ ಪಟ್ಟಿಯಲ್ಲಿ ಇರಲಿಲ್ಲ!

ದಾವಣಗೆರೆ : ಮತ ಚಲಾಯಿಸಲು ಸಾವಿರಾರು ಕಿಮಿ ದೂರದ ಅಮೇರಿಕಾದಿಂದ ಲಕ್ಷಾಂತರ ರೂಪಾಯಿ ಖರ್ಚು ಮಾಡಿಕೊಂಡು ದಾವಣಗೆರೆಗೆ ಬಂದಿರುವ ವ್ಯಕ್ತಿಯೊಬ್ಬರು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಕಾರಣಕ್ಕೆ ಮತದಾನದಿಂದ ವಂಚಿತರಾಗಿದ್ದಾರೆ.



ಅಮೆರಿಕಾದಲ್ಲಿ ಸಾಫ್ಟವೇರ್ ಉದ್ಯೋಗಿ ಆಗಿರುವ ರಾಘವೇಂದ್ರ ಕಮಾಲಕರ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರಿರುವದನ್ನು ದೃಢ ಪಡೆಸಿಕೊಂಡು ಮತದಾನಕ್ಕಾಗಿಯೇ ದಾವಣಗೆರೆಗೆ ಬಂದಿದ್ದಾರೆ. ಆದರೆ, ಅವರ ಹೆಸರೇ ಮತದಾನದ ಪಟ್ಟಿಯಿಂದ ಮಾಯವಾಗಿತ್ತು. ಹೀಗಾಗಿ ಮತದಾನ ಮಾಡಲು ಸಾಧ್ಯವಾಗಲಿಲ್ಲ.



ಕಳೆದ ಜನವರಿ ತಿಂಗಳಲ್ಲಿ ಮತದಾರರ ಪಟ್ಟಿಯಲ್ಲಿ ನನ್ನ ಹೆಸರು ಪಟ್ಟಿಯಲ್ಲಿತ್ತು. ನನಗೆ ಮಾಹಿತಿಯೂ ಬಂದಿತ್ತು. ಆದರೆ ವಿದ್ಯಾನಗರದ ಮಾಗನೂರು ಬಸಪ್ಪ ಶಾಲೆಯಲ್ಲಿ ನಾನು ಮತ ಚಲಾಯಿಸಲು ಬಂದಾಗ ಪಟ್ಟಿಯಲ್ಲಿ ನನ್ನ ಹೆಸರೇ ಇಲ್ಲ. ಮತದಾನ ಮಾಡಲಿಕ್ಕೆ ಆಗಲೇ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು.



ನಾನು ಮತದಾನ ಮಾಡುವ ಸಲುವಾಗಿಯೇ ಅಮೇರಿಕಾದಿಂದ ಸುಮಾರು ಒಂದೂವರೆ ಲಕ್ಷ ರೂಪಾಯಿ ಖರ್ಚು ಮಾಡಿಕೊಂಡು ಬಂದಿದ್ದೇನೆ ಆದರೆ ನನಗೆ ಮತದಾನ ಮಾಡಲು ಸಾಧ್ಯವಾಗಲಿಲ್ಲ. ಮತದಾನ ಪ್ರತಿಯೊಬ್ಬರ ಜವಾಬ್ದಾರಿ. ಅದನ್ನರಿತು ಮತ ಚಲಾಯಿಸಲು ಬಂದಿದ್ದೆ ಆದರೆ ಮತಹಾಕಲು‌ ಸಾಧ್ಯವಾಗಲಿಲ್ಲ ಎಂದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿವೃತ್ತ ಶಿಕ್ಷಕ ಶ್ರೀ ಎಸ್. ಎ. ಕೊತವಾಲ್ ನಿಧನನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಎನ್‌ಟಿಎ ವಿಷಯ ತಜ್ಞರೇ ರೂವಾರಿಗಳುಇಂಡಿಯಲ್ಲಿ ಬೀದಿ ನಾಯಿಗಳ ದಾಳಿ: ಇಬ್ಬರು ಮಕ್ಕಳಿಗೆ ಗಂಭೀರ ಗಾಯಬ್ರಹ್ಮಾಂಡ ಭ್ರಷ್ಟಾಚಾರ : ಸಿಬಿಐ ತನಿಖೆ ನಡುವೆಯೂ ಪಿಎನ್‌ಸಿ ಇನ್‌ಫ್ರಾಟೆಕ್‌ಗೆ 3,483 ಕೋಟಿ ರೂ. ಹೆದ್ದಾರಿ ಗುತ್ತಿಗೆಗದ್ದಲದಲ್ಲೇ ಸಾಗಿದ ಸಂಸತ್; ಚರ್ಚೆಯಿಲ್ಲದೆ ತೆರಿಗೆ ತಿದ್ದುಪಡಿ ಮಸೂದೆಗೆ ಒಪ್ಪಿಗೆ'ಮೋದಿ ಸರ್ವಾಧಿಕಾರಿಯಾಗಿದ್ದರೆ ಚೆನ್ನಾಗಿತ್ತು' ಎಂದ ರೂಪಾಲಿ ಗಂಗೂಲಿ; ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶಧರಣಿಯಲ್ಲಿ ಮೊಳಗಿದ ಏಕತೆಯ ಸಂದೇಶ: ಜಾತಿ–ಧರ್ಮ ಮೀರಿ ವಿದ್ಯಾರ್ಥಿಗಳಿಗೆ ನೆರವುಬೈಕ್–ಬಸ್ ಮುಖಾಮುಖಿ ಡಿಕ್ಕಿ: ತಂದೆ, ಮಗಳು ಸೇರಿ ಮೂವರು ಸ್ಥಳದಲ್ಲೇ ಮೃತ್ಯು'ತೆಹೆಲ್ಕಾ' ಪತ್ರಿಕೆ ಮಾಜಿ ಪ್ರಧಾನ ಸಂಪಾದಕ ತರುಣ ತೇಜ್‌ಪಾಲಗೆ 10 ವರ್ಷ ಜೈಲು ಶಿಕ್ಷೆರೈಲು ಹಳಿ ಮಧ್ಯೆ ಕೆಟ್ಟು ನಿಂತ ಶಾಲಾ ವಾಹನ; ಗ್ರಾಮಸ್ಥರ ಸಮಯಪ್ರಜ್ಞೆಗೆ ತಪ್ಪಿದ ಭಾರೀ ದುರಂತ