LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಮನೆಗೆ ನುಗ್ಗಿ ಮಕ್ಕಳ ಅಪಹರಣ : ಗುಂಡು ಹಾರಿಸಿ ಮಕ್ಕಳನ್ನು ರಕ್ಷಿಸಿದ ಪೊಲೀಸರು!

ಅಥಣಿ :ಮನೆಗೆ ನುಗ್ಗಿ ಮಕ್ಕಳನ್ನು ಅಪಹರಿಸಿ ಪರಾರಿಯಾಗುತ್ತಿದ್ದ ದುಷ್ಕರ್ಮಿಗಳ ಮೇಲೆ ಅಥಣಿ ಪೊಲೀಸರು ಗುಂಡು ಹಾರಿಸಿ ಇಬ್ಬರೂ ಬಾಲಕರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿರುವ ಘಟನೆ ಅಥಣಿ ತಾಲೂಕಿನ ಮಹಾರಾಷ್ಟ್ರ ಗಡಿಯಲ್ಲಿ ಗುರುವಾರ ನಡೆದಿದೆ. ಪೊಲೀಸರು ಕಾರ್ಯಾಚರಣೆ ನಡೆಸಿ, ಮೂವರನ್ನು ಬಂಧಿಸಿದ್ದಾರೆ.



ಚಿಕ್ಕೋಡಿ ತಾಲೂಕಿನ ರವಿಕಿರಣ ಕಮ್ಲಾಕರ, ಬಿಹಾರದ ಮೂಲದ ಸದ್ಯ ಮುಂಬೈ ನಿವಾಸಿ ಶಾರುಖ ಶೇಖ ಮತ್ತು ಕೊಲ್ಲಾಪುರ ಜಿಲ್ಲೆಯ ಸಂಬಾ ಕಾಂಬಳೆ ಬಂಧಿತ ಆರೋಪಿಗಳು.



ಅಥಣಿಯ ಹುಲಗಬಾಳ ರಸ್ತೆಯ ಸ್ವಾಮಿ ಪ್ಲಾಟ್ ಬಡಾವಣೆಯ ವಿಜಯ ದೇಸಾಯಿ ಎಂಬುವರ ಮನೆಗೆ ನುಗ್ಗಿ ಅವರ 4 ಮತ್ತು 3 ವರ್ಷದ ಮಕ್ಕಳನ್ನು ಅಪಹರಿಸಿ ದುಷ್ಕರ್ಮಿಗಳು ಪರಾರಿಯಾಗಿದ್ದರು. ವಿಷಯ ತಿಳಿದು ಕೂಡಲೇ ಕಾರ್ಯಪ್ರವೃತ್ತರಾದ ಅಥಣಿ ಪೊಲೀಸರು ಮೂರು ತಂಡಗಳನ್ನು ರಚಿಸಿ ಕಾರ್ಯಾಚರಣೆಗೆ ಇಳಿದಿದ್ದರು. ಮಹಾರಾಷ್ಟ್ರ ಗಡಿಯಾದ ಕೋಹಳ್ಳಿ ಸಿಂಧೂರ ಮಾರ್ಗ ಮಧ್ಯದಲ್ಲಿ ಅಪಹರಣಕಾರರನ್ನು ಪೊಲೀಸರು ತಡೆಗಟ್ಟಿದಾಗ ಪೊಲೀಸರು ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾರೆ ಎನ್ನಲಾಗಿದೆ. ಆಗ ಪೊಲೀಸರು ಆತ್ಮರಕ್ಷಣೆಗೆ ಆರೋಪಿಯ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ.



ಬಂಧಿತ ಕೊಲ್ಲಾಪುರ ಜಿಲ್ಲೆ ಹಾತ ಕಣಗಲಾ ಗ್ರಾಮದ ಸಂಬಾ ರಾವಸಾಬ ಕಾಂಬಳೆ ಎಂದು ಗುರುತಿಸಲಾಗಿದ್ದು ಆತನನ್ನು ಅಥಣಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಬೆಳಗಾವಿ ಎಸ್​ಪಿ ಭೀಮಾಶಂಕರ ಗುಳೇದ ಪತ್ರಿಕೆಗಳಿಗೆ ಮಾಹಿತಿ ನೀಡಿದ್ದಾರೆ. ಕಾರ್ಯಾಚರಣೆಯಲ್ಲಿ ಜಮೀರ ಡಾಂಗೆ ಹಾಗೂ ರಮೇಶ ಹಾದಿಮನಿ ಎಂಬ ಇಬ್ಬರು ಪೊಲೀಸ್ ಸಿಬ್ಬಂದಿ ಸಹ ಗಾಯಗೊಂಡಿದ್ದು, ಅವರನ್ನು ಅಥಣಿ ಸಮುದಾಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.



ಸಾರ್ವಜನಿಕರಿಂದ ಪ್ರಶಂಸೆ:



ಅಥಣಿ ಪೊಲೀಸರ ತುರ್ತು ಕಾರ್ಯಾಚರಣೆಯಿಂದ ಇಬ್ಬರು ಮಕ್ಕಳು ಸುರಕ್ಷಿತವಾಗಿ ಮನೆ ಸೇರಿವೆ. ಪೊಲೀಸರ ಸಕಾಲಿಕ ಕರ್ತವ್ಯಪ್ರಜ್ಞೆಯ ಬಗ್ಗೆ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಬಾಲಕರನ್ನು ಪೊಲೀಸರು ತಮ್ಮ ಮಡಿಗೆ ಒಪ್ಪಿಸಿದ್ದರಿಂದ ಆತಂಕದಲ್ಲಿದ್ದ ಪೋಷಕರು ನಿಟ್ಟುಸಿರು ಬಿಟ್ಟಿದ್ದಾರೆ.



ನಮ್ಮ ಮನೆಯಲ್ಲಿ ಇವತ್ತು ಯಾರೂ ಇರಲಿಲ್ಲ, ನಮ್ಮ ತಾಯಿಯವರು ಒಬ್ಬರೇ ಇದ್ದರು. ನಾನು ಮತ್ತು ನನ್ನ ಹೆಂಡತಿ ಕೆಲಸದ ಮೇಲೆ ಹೊರಗಡೆ ಬಂದಿದ್ದೀವಿ. ನಾನು ಕೂಡ ಇವತ್ತು ಕೆಲಸ ಅಂಗವಾಗಿ ಬೆಳಗಾವಿಯಲ್ಲಿ ಇರುವುದರಿಂದ ಈ ಘಟನೆ ಸಂಭವಿಸಿದೆ. ಯಾರೋ ಗೊತ್ತಿಲ್ಲ ನಮ್ಮ ಮನೆಗೆ ನುಗ್ಗಿ ನಮ್ಮ ಮಕ್ಕಳನ್ನು ಅಪಹರಿಸಿದ್ದಾರೆ, ಸದ್ಯಕ್ಕೆ ನಮಗೆ ಭಯ ಆಗುತ್ತಿದೆ. ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿದ್ದೇವೆ ಎಂದು ವಿಜಯ ದೇಸಾಯಿ ಪ್ರತಿಕ್ರಿಯೆ ನೀಡಿದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ