LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಸೋರದಿದ್ದರೂ ಮೋಜಿಗಾಗಿ ಕೊಡೆ ಹಿಡಿದು ಬಸ್ ಚಾಲನೆಯ ವಿಡಿಯೋ ಮಾಡಿ ಅಮಾನತ್ತಾದ ಚಾಲಕ, ಕಂಡಕ್ಟರ್!

ಹುಬ್ಬಳ್ಳಿ, ಮೇ ೨೫:  ಬಸ್‌ ಮೇಲ್ಛಾವಣಿ ಸೋರದಿದ್ದರೂ ಮೋಜಿಗಾಗಿ ಕೊಡೆ ಹಿಡಿದು ಬಸ್‌ ಚಾಲನೆ ಮಾಡಿದ ವಾಯವ್ಯ ಸಾರಿಗೆ ಸಂಸ್ಥೆಯ ಚಾಲಕ ಹಾಗೂ ಅದನ್ನು ಚಿತ್ರೀಕರಣ ಮಾಡಿದ ನಿರ್ವಾಹಕಿಯನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.



ಚಾಲಕ ಹನುಮಂತ ಕಿಲ್ಲೇದಾರ ಹಾಗೂ ನಿರ್ವಾಹಕಿ ಎಚ್‌.ಅನಿತಾ ಅಮಾನತಾದವರು. ಮೇ 23ರಂದು ಉಪ್ಪಿನಬೆಟಗೇರಿ-ಧಾರವಾಡ ಮಾರ್ಗದಲ್ಲಿ ಬಸ್‌ ಹೋಗುತ್ತಿರುವಾಗ ಈ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿತ್ತು. ವಿಡಿಯೋ ವೈರಲ್‌ ಆಗುತ್ತಿದ್ದಂತೆ ಧಾರವಾಡ ವಿಭಾಗೀಯ ನಿಯಂತ್ರಣಾಧಿಕಾರಿ ಬಸ್‌ನ ವಾಸ್ತವತೆ ಕುರಿತು ವರದಿ ನೀಡಲು ವಿಭಾಗೀಯ ತಾಂತ್ರಿಕ ಶಿಲ್ಪಿಗೆ ಸೂಚಿಸಿದ್ದಾರೆ. ಅಧಿಕಾರಿಗಳು ವಾಹನ ತಪಾಸಣೆ ಮಾಡಿ, ಚಾಲಕ ಕುಳಿತುಕೊಳ್ಳುವ ಸ್ಥಳ ಅಥವಾ ಇತರೆ ಯಾವುದೇ ಭಾಗದಲ್ಲಿ ಮಳೆಯಿಂದ ಬಸ್‌ ಮೇಲ್ಛಾವಣಿ ಸೋರುತ್ತಿರಲಿಲ್ಲ ಎನ್ನುವ ಪರಿಶೀಲನಾ ವರದಿ ಸಲ್ಲಿಸಿದ್ದರು.



ಬಸ್‌ನಲ್ಲಿ ಪ್ರಯಾಣಿಕರು ಇಲ್ಲದ ಕಾರಣ ಮನರಂಜನೆಗಾಗಿ ವಿಡಿಯೋ ಮಾಡಿದ್ದಾರೆ. ವಾಹನದ ಛಾವಣಿ ಸೋರಿಕೆ ಬಗ್ಗೆ ಚಾಲಕ, ನಿರ್ವಾಹಕ ಹಾಗೂ ಪ್ರಯಾಣಿಕರ ಯಾವುದೇ ದೂರು ದಾಖಲು ಮಾಡಿಲ್ಲ. ಈ ವಿಡಿಯೋ ಕುರಿತು ಚಾಲನಾ ಸಿಬ್ಬಂದಿಯಿಂದ ಸ್ಪಷ್ಟೀಕರಣ ಪಡೆದಾಗ ತಾವು ಮನರಂಜನೆಗಾಗಿ ಚಿತ್ರೀಕರಣ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿಗೆ ಸಲ್ಲಿಸಿದ ವರದಿಯಲ್ಲಿ ಉಲ್ಲೇಖಿಸಲಾಗಿದೆ.



ವರದಿ ಆಧಾರದ ಮೇಲೆ ವಿಭಾಗೀಯ ನಿಯಂತ್ರಣಾಧಿಕಾರಿಗಳು ಸಿಬ್ಬಂದಿಯ ಕರ್ತವ್ಯ ಲೋಪ ಹಾಗೂ ಸಂಸ್ಥೆ ಘನತೆಗೆ ಧಕ್ಕೆಯಾಗುವಂತಹ ಕೆಲಸವಾಗಿದ್ದರಿಂದ ಚಾಲಕ ಮತ್ತು ನಿರ್ವಾಹಕಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.



ವಿಡಿಯೋ ಚಿತ್ರೀಕರಣವನ್ನು ಮೇ 23ರಂದು ಮಾಡಿದ್ದಾರೆ. ನಮ್ಮ ಗಮನಕ್ಕೆ 24ರಂದು ಬಂದಿದೆ. ಕೂಡಲೇ ಸಂಬಂಧಿಸಿದ ಅಧಿಕಾರಿಗಳನ್ನು ಕರೆದು ವಾಹನ ಪರಿಶೀಲನೆಗೆ ಸೂಚಿಸಿದ್ದೆ. ವಾಹನದಲ್ಲಿ ಅಂತಹ ನ್ಯೂನತೆ ಇರಲಿಲ್ಲ ಎಂದು ವರದಿ ನೀಡಿದ್ದಾರೆ. ಚಾಲಕನನ್ನು ಕರೆಯಿಸಿ ವಿಚಾರಿಸಿದಾಗ ಮನರಂಜನೆಗಾಗಿ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಸಿಬ್ಬಂದಿಯ ಕರ್ತವ್ಯ ಲೋಪ ಹಾಗೂ ಸಂಸ್ಥೆ ಘನತೆಗೆ ಧಕ್ಕೆಯಾಗುವಂತಹ ಕೆಲಸವಾಗಿದ್ದರಿಂದ ಇಬ್ಬರನ್ನು ಅಮಾನತು ಮಾಡಲಾಗಿದೆ ಎಂದು ಧಾರವಾಡ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಶಶಿಧರ ಚನ್ನಪ್ಪಗೌಡರ ತಿಳಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಎಪಿ ನಾಯಕ ದೀಪಕ ಸಿಂಗ್ಲಾ ಮನೆ ಮೇಲೆ ಇ.ಡಿ ದಾಳಿಮೇ 20ರ ಸಾರಿಗೆ ಮುಷ್ಕರ ನಿಲ್ಲದು : ನೌಕರರ ಪಟ್ಟು ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವು