LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Crime News

ಹಾವೇರಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಬಂಧನ.

 



ಹಾವೇರಿ: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಶಹರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಸವಣೂರಿನ ಅಂಬೇಡ್ಕರ್‌ ನಗರದ ನಿವಾಸಿಗಳಾದ ಲೋಹಿತ ತಂದೆ ಕೃಷ್ಣಪ್ಪ ಮುನಿಯಪ್ಪನವರ(23), ಮಹೇಶ ತಂದೆ

ಅಶೋಕ ಮೈಲಮ್ಮನವರ(23) ಮತ್ತು ಸವಣೂರಿನ ಹಾವಣಗಿ ಪ್ಲಾಟ್‌ ನಿವಾಸಿ ಮನೋಜ ತಂದೆ ಕರಿಯಪ್ಪ ಚಾರಿ(21) ಎಂದು

ಗುರುತಿಸಲಾಗಿದೆ.

ಬಂಧಿತರಿಂದ 3 ಲಕ್ಷ 17 ಸಾವಿರ 400 ರೂಪಾಯಿ ಮೌಲ್ಯದ 3 ಬ್ಯಾಗ್‌ಗಳಲ್ಲಿದ್ದ 7935 ಗ್ರಾಂ ತೂಕದ ಗಾಂಜಾ, 3370

ರೂಪಾಯಿ ನಗದು ಹಣ ಮತ್ತು ಸಣ್ಣ ಸಣ್ಣ ಪ್ಲಾಸ್ಟಿಕ್‌ ಪ್ಯಾಕೆಟ್‌ಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ನಗರದ ಹಾವೇರಿ-ಗುತ್ತಲ ರಸ್ತೆಯಲ್ಲಿರುವ

ರೈಲ್ವೆ ಬ್ರಿಡ್ಜ್‌ ಹತ್ತಿರ ಆರೋಪಿಗಳು ಸಾರ್ವಜನಿಕ ರಸ್ತೆ ಬದಿಯಲ್ಲಿ ತಮ್ಮ ಸ್ವಂತ ಲಾಭಕ್ಕೋಸ್ಕರ್‌ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದರು

ಎನ್ನಲಾಗಿದೆ.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಅವರ ಮಾರ್ಗದರ್ಶನದಲ್ಲಿ ಹೆಚ್ಚುವರಿ ಎಸ್ಪಿ ಎಲ್.ವೈ.ಶಿರಕೋಳ, ಡಿವೈಎಸ್‌ಪಿ

ಎಂ.ಎಸ್.ಪಾಟೀಲ ಅವರ ನೇತೃತ್ವದಲ್ಲಿ ಹಾವೇರಿ ಶಹರ ಪೊಲೀಸ್‌ ಠಾಣೆಯ ಉಸ್ತುವಾರಿ ಅಧಿಕಾರಿ ಪೊಲೀಸ್‌ ಇನ್ಸಪೆಕ್ಟರ್‌ ಮೋತಿಲಾಲ್‌ ಪವಾರ

ಅವರ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬಂಧಿತ ಆರೋಪಿಗಳನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದ್ದು, ತನಿಖೆ ಮುಂದುವರೆದಿದೆ

ಎಂದು ಎಸ್ಪಿ ಯಶೋದಾ ವಂಟಗೋಡಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ