LIVE TV LocalCrimeNationalInternationalPoliticsFinancialEducationTechnologyEntertainmentSportsHealthFeatureTravelingBeautyRecipes
State News

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ 5 ದಿನ ಗುಡುಗು ಸಹಿತ ಮಳೆ

ಬೆಂಗಳೂರು, ಅ. 22 (ಸಮದರ್ಶಿ ಸುದ್ದಿ): ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದರೆ, ಉತ್ತರ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಒಣ ಹವಾಮಾನ ಮುಂದುವರಿಯಲಿದೆ.

ಅಕ್ಟೋಬರ್ 23 ಮತ್ತು 24ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಹಗುರ ಮಳೆಯಾಗಬಹುದು. ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳ ಒಂದೆರಡು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದೆ.

ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಶುಕ್ರವಾರ ಮತ್ತು ಶನಿವಾರ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ತುಮಕೂರು ಜಿಲ್ಲೆಗಳ ವಿವಿಧ ಪ್ರದೇಶಗಳಲ್ಲಿಯೂ ಹಗುರದಿಂದ ಸಾಧಾರಣ ಮಳೆಯಾಗಬಹುದು.

ಶುಕ್ರವಾರ ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದ್ದರೂ ಶನಿವಾರದಿಂದ ಈ ಭಾಗಗಳಲ್ಲಿ ಒಣ ಹವಾಮಾನ ಕಂಡುಬರಲಿದೆ.

ಇದೇ ಅವಧಿಯಲ್ಲಿ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಿದ್ದು, ಬಹುತೇಕ ಒಣ ಹವಾಮಾನ ಇರಲಿದೆ.

ಅಕ್ಟೋಬರ್ 26 ಮತ್ತು 27ರಂದು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಹಗುರ ಮಳೆಯಾಗಬಹುದಾದರೂ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರಿಯಲಿದೆ.

ಈ ಎರಡು ದಿನಗಳಲ್ಲಿ ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ವಿಜಯಪುರ, ಕಲಬುರಗಿ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಸೋಮವಾರ ಮತ್ತು ಮಂಗಳವಾರ ಒಣ ಹವಾಮಾನ ಇರಲಿದೆ. ಹಾಸನ, ಶಿವಮೊಗ್ಗ, ತುಮಕೂರು, ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿಯೂ ಮಳೆಯ ಸಾಧ್ಯತೆ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬರ : 20,585 ಕೋಟಿ ರೂ. ಬಿಡುಗಡೆಗೆ ಕೇಂದ್ರಕ್ಕೆ ಪರಮೇಶ್ವರ ಆಗ್ರಹಇನಸ್ಟಾಗ್ರಾಮಗೆ ಕಾಲಿಟ್ಟ ಸೋನಿಯಾ ಗಾಂಧಿ: ಆತ್ಮಕತೆಯ ಮೊದಲ ನೋಟ ಬಿಡುಗಡೆನ್ಯಾಯಾಧೀಶರ ಸಾಂವಿಧಾನಿಕ ಬದ್ಧತೆ ಪ್ರಶ್ನಿಸಿದ್ದ ಶಿವಸುಂದರ ಫೇಸಬುಕ್ ಪೋಸ್ಟಗೆ ನಿರ್ಬಂಧಪೊಲೀಸರ ಲಾಠಿ ಏಟು: 4 ವರ್ಷದ ಬಾಲಕನಿಗೆ ಗಂಭೀರ ಗಾಯದಸರಾ ವೇಳೆ ಸಚಿವರನ್ನು ತಡೆದ ಪ್ರಕರಣ: ತನಿಖೆಗೆ ಮುಖ್ಯ ಕಾರ್ಯದರ್ಶಿಗೆ ಸೂಚನೆಸೌದಿ ವಿಮಾನ ನಿಲ್ದಾಣದ ಮೇಲೆ ದಾಳಿ: ಭಾರತೀಯ ಸೇರಿ ಇಬ್ಬರ ಸಾವು, 8 ಮಂದಿಗೆ ಗಾಯಜೈಲಿನಿಂದ ಬಿಡುಗಡೆಯಾದ ಮರುದಿನವೇ ಸಿಜೆಪಿ ನಾಯಕರಿಗೆ ಕ್ರೈಮ್ ಬ್ರಾಂಚ್ ಸಮನ್ಸಪುತ್ರನ ಛಾಯಾಚಿತ್ರಗಳಿಗೆ ನಿರ್ಬಂಧ: ಪ್ರಿಯಾಂಕಾ ಆಕ್ರೋಶರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ 5 ದಿನ ಗುಡುಗು ಸಹಿತ ಮಳೆಗೋಕರ್ಣದಲ್ಲಿ ಅಲೆಗಳಿಗೆ ಸಿಲುಕಿದ್ದ ಮೂವರು ಪ್ರವಾಸಿಗರ ರಕ್ಷಣೆ