LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ತ್ಯಾಗರಾಜ ಚನ್ನಮ್ಮ ವಿವಿ ಕುಲಪತಿ

ಬೆಳಗಾವಿ, 6:  ಬೆಳಗಾವಿಯಲ್ಲಿ ಮುಖ್ಯ ಕಚೇರಿ ಹೊಂದಿರುವ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಪ್ರೊ. ಸಿ.ಎಂ. ತ್ಯಾಗರಾಜ ಅವರನ್ನು ನೇಮಕ ಮಾಡಿ ರಾಜ್ಯಪಾಲ ಥಾವರಚಂದ ಗೆಹ್ಲೋಟ ಆದೇಶ ಹೊರಡಿಸಿದ್ದಾರೆ.



ಚಿಕ್ಕಮಗಳೂರು ಜಿಲ್ಲೆಯವರಾದ ತ್ಯಾಗರಾಜ ಅವರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ವಾಣಿಜ್ಯ ವಿಭಾಗದ ಡೀನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಈಗ ಇದೇ ವಿಶ್ವವಿದ್ಯಾಲಯಕ್ಕೆ‌ ಕುಲಪತಿಯಾಗಿ ನೇಮಕಗೊಂಡಿದ್ದಾರೆ.



ಶಿವಮೊಗ್ಗದ ನ್ಯಾಷನಲ್‌ ಕಾಲೇಜಿನಲ್ಲಿ ಅಧ್ಯಾಪನ ವೃತ್ತಿ ಆರಂಭಿಸಿ ಎರಡು ದಶಕಗಳ ಕಾಲ‌ ಸೇವೆ ಸಲ್ಲಿಸಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಮೊದಲ ಪ್ರಾಧ್ಯಾಪಕರಾಗಿ ನೇಮಕಗೊಂಡು ವ್ಯವಹಾರ ನಿರ್ವಹಣಾ ಶಾಸ್ತ್ರದಲ್ಲಿ 12 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ.



ಈ ಮಧ್ಯೆ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದಲ್ಲಿ ಕುಲಸಚಿವರಾಗಿ ಮತ್ತು ಚನ್ನಮ್ಮ ವಿವಿಯಲ್ಲಿ ಮೌಲ್ಯಮಾಪನ ಕುಲಸಚಿವರಾಗಿ, ಶಿವಮೊಗ್ಗ ಕುವೆಂಪು ವಿವಿ ಮೌಲ್ಯಮಾಪನ ಕುಲಸಚಿವರಾಗಿ ಅವರು  ಸೇವೆ ಸಲ್ಲಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ