LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆ 

ಹುಬ್ಬಳ್ಳಿ: ಟಿಪ್ಪು ಜಯಂತಿ ಆಚರಣೆಗೆ ಹು-ಧಾ ಮಹಾನಗರ ಪಾಲಿಕೆ ಅನುಮತಿ ಕೊಟ್ಟ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಯಶಸ್ವಿಯಾಗಿ ಟಿಪ್ಪು ಜಯಂತಿ ಮಾಡಲಾಗಿದೆ.



ಎಐಎಂಐಎಂ ಜಂಟಿ ಕಾರ್ಯದರ್ಶಿ ವಿಜಯ ಗುಂಟ್ರಾಳ ನೇತೃತ್ವದಲ್ಲಿ ಟಿಪ್ಪು ಜಯಂತಿ ಆಚರಿಸಲಾಗಿದೆ. ಎಐಎಂಐಎಂ ಕಾರ್ಯಕರ್ತರು ಟಿಪ್ಪು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಟಿಪ್ಪು ಸುಲ್ತಾನ​​ ಪರ ಘೋಷಣೆ ಕೂಗಿ ಟಿಪ್ಪು ಜಯಂತಿ ಆಚರಿಸಿದರು.



ಹುಬ್ಬಳ್ಳಿ- ಧಾರವಾಡ ಮಹಾನಗರಪಾಲಿಕೆ ಹಲವು ಷರತ್ತುಗಳ ವಿಧಿಸಿ ಆಚರಣೆಗೆ ಅನುಮತಿ ನೀಡಿತ್ತು. 10 ಸಾವಿರ ರೂ. ಪಾವತಿಸಬೇಕು, ಟಿಪ್ಪು ಸುಲ್ತಾನ್ ಫೋಟೋ ಬಿಟ್ಟು ಬೇರೆ ಫೋಟೋ ಹಾಕದಂತೆ ಷರತ್ತು ಹಾಕಿತ್ತು.



ಅದರಂತೆಯೇ ವಿಜಯ ಗುಂಟ್ರಾಳ​ ನೇತೃತ್ವದಲ್ಲಿ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ನೆರವೇರಿದೆ. ಕಾರ್ಯಕ್ರಮದಲ್ಲಿ ಅಂಜುಮನ್ ಕಮೀಟಿ ಸದಸ್ಯರು, ಮುಸ್ಲಿಂ ಬಾಂಧವರು ಸೇರಿದಂತೆ ಹಲವರು ಭಾಗಿಯಾಗಿದ್ದು ಟಿಪ್ಪು ಸುಲ್ತಾನ ಪರ ಜೈಘೋಷ ಕೂಗಿ ಸಂಭ್ರಮಿಸಿದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ