LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಕಾಂಗ್ರೆಸ್ ಮೇಲಿನ ನಂಬಿಕೆ ಕುಸಿದಿದೆ : ತನ್ವೀರ ಸೇಠ್

ಮೈಸೂರು, ಆಗಸ್ಟ್ 3: ಹೈಕಮಾಂಡ್ ನೀಡಿದ್ದ ಭರವಸೆ ಈಡೇರಿಲ್ಲ ಎಂದು ಸಚಿವ ಸಂಪುಟ ವಿಸ್ತರಣೆಯಲ್ಲಿ ಅವಕಾಶ ವಂಚಿತರಾದ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ತನ್ವೀರ ಸೇಠ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮ್ಮ ಮುಂದಿನ ರಾಜಕೀಯ ನಡೆ ಕಾರ್ಯಕರ್ತರ ಅಭಿಪ್ರಾಯದ ಮೇರೆಗೆ ನಿರ್ಧಾರವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಸೋಮವಾರ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ಸಚಿವ ಸ್ಥಾನದ ನಿರೀಕ್ಷೆ ಭಗ್ನಗೊಂಡಿರುವುದನ್ನು ಬಹಿರಂಗಪಡಿಸಿದರು. "ನನ್ನ ಆಸೆ ನಿರಾಸೆಯಾಗಿದೆ. ಎರಡೂವರೆ ವರ್ಷಗಳ ಬಳಿಕ ಸಚಿವ ಸ್ಥಾನ ನೀಡಲಾಗುವುದು ಎಂಬ ಭರವಸೆ ನೀಡಲಾಗಿತ್ತು. ಆದರೆ ಆ ಮಾತು ಉಳಿಯಲಿಲ್ಲ" ಎಂದು ಹೇಳಿದರು.

ರಾಹುಲ್ ಗಾಂಧಿ ಕುರಿತು ಒಂದೇ ಒಂದು ಪದ ಮಾತನಾಡಿದ್ದಕ್ಕಾಗಿ ಸಚಿವ ರಾಜಣ್ಣ ಸ್ಥಾನ ಕಳೆದುಕೊಂಡರು. ಆದರೆ ಪಕ್ಷದ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡಿದವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಜಮೀರ್ ಅಹ್ಮದ್ ಮಾತ್ರವಲ್ಲದೆ ಇನ್ನೂ ಹಲವರು ಪಕ್ಷದ ವರ್ಚಸ್ಸಿಗೆ ಧಕ್ಕೆ ಉಂಟುಮಾಡುವ ರೀತಿಯಲ್ಲಿ ವರ್ತಿಸಿದ್ದರೂ ಅವರ ವಿರುದ್ಧ ಶಿಸ್ತು ಕ್ರಮವಾಗಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ತಾವು ಯಾರ ವಿರುದ್ಧವೂ ವೈಯಕ್ತಿಕ ಟೀಕೆ ಮಾಡಿಲ್ಲ. ಕೋಪ, ನೋವು ಮತ್ತು ಬೇಸರ ಇದ್ದರೂ ಪಕ್ಷದ ಶಿಸ್ತಿನ ಸಿಪಾಯಿಯಾಗಿ ನಡೆದುಕೊಂಡಿದ್ದೇನೆ. ಯಾವುದೇ ನಿಗಮ-ಮಂಡಳಿ ಸ್ಥಾನವೂ ಬೇಡ ಎಂದು ಮೊದಲೇ ತಿಳಿಸಿದ್ದೆ. ಮೈಸೂರು ಜಿಲ್ಲೆಯವರೇ ಮುಖ್ಯಮಂತ್ರಿ ಎಂಬ ಕಾರಣದಿಂದ ಸಚಿವ ಸ್ಥಾನ ನೀಡಲು ಸಾಧ್ಯವಿಲ್ಲ ಎಂದು ಹೇಳಿದಾಗಲೂ ಮೌನವಾಗಿಯೇ ಇದ್ದೆ ಎಂದು ಹೇಳಿದರು.

ಸಚಿವ ಸ್ಥಾನಕ್ಕಾಗಿ ದೆಹಲಿಗೆ ತೆರಳಿ ಲಾಬಿ ಮಾಡಲಿಲ್ಲ, ಈಗಲೂ ಮಾಡುವುದಿಲ್ಲ. ಹೈಕಮಾಂಡ್‌ನಿಂದ ನನಗೆ ಅನ್ಯಾಯವಾಗಿಲ್ಲ. ರಾಜ್ಯದ ಕೆಲ ನಾಯಕರು ನನ್ನ ಅವಕಾಶ ತಪ್ಪಿಸಿದ್ದಾರೆ. ಯಾರು ಈ ಬೆಳವಣಿಗೆಗೆ ಕಾರಣ ಎಂಬುದನ್ನು ಶೀಘ್ರದಲ್ಲೇ ಬಹಿರಂಗಪಡಿಸುತ್ತೇನೆ ಎಂದು ಅವರು ತಿಳಿಸಿದರು.

ಮೈಸೂರು ನಗರ ಮತ್ತು ಜಿಲ್ಲೆಗೆ ಸೇವೆ ಸಲ್ಲಿಸುವ ಅವಕಾಶವನ್ನು ಕಸಿದುಕೊಳ್ಳಲಾಗಿದೆ. ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಅಭಿಮಾನಿಗಳು ರಾಜೀನಾಮೆ ನೀಡುವಂತೆ ಒತ್ತಾಯಿಸುತ್ತಿದ್ದಾರೆ. ಆದರೆ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದ ಬಳಿಕವೇ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ. ಪಕ್ಷದ ಮೇಲಿದ್ದ ನಂಬಿಕೆ ಈಗ ಕುಸಿದಿದೆ ಎಂದು ತನ್ವೀರ ಸೇಠ ಹೇಳಿದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅನುಭವಿಗಳಿಂದ ಹೊಸ ಮುಖಗಳವರೆಗೆ: ಸಚಿವ ಸಂಪುಟ ಸೇರಿದ 19 ಶಾಸಕರ ರಾಜಕೀಯ ಪಯಣಮಳೆ ಅಬ್ಬರಕ್ಕೆ ರಾಜ್ಯ ತತ್ತರ : ಜಲಾಶಯಗಳು ಭರ್ತಿ, ನದಿ-ಹಳ್ಳಗಳು ಅಪಾಯದ ಮಟ್ಟಕ್ಕೆಸಂಪುಟ ವಿಸ್ತರಣೆಯಲ್ಲೇ ಕೊನೆ ಕ್ಷಣದ ಬದಲಾವಣೆ: 19 ಮಂದಿಗೆ ಮಾತ್ರ ಸ್ಥಾನಕಾಂಗ್ರೆಸ್ ಮೇಲಿನ ನಂಬಿಕೆ ಕುಸಿದಿದೆ : ತನ್ವೀರ ಸೇಠ್ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಮೊದಲ ರಾಜಕೀಯ ಗೆಲುವುಗೋವಾದಲ್ಲಿ ಹೊಸ ಕಟ್ಟುನಿಟ್ಟಿನ ನಿಯಮ: ಈ ತಪ್ಪು ಮಾಡಿದರೆ ₹1 ಲಕ್ಷದವರೆಗೆ ದಂಡಗರ್ಭಪಾತ ಜಾಲದ ಬೆಚ್ಚಿಬೀಳಿಸುವ ಸತ್ಯ: ‘ಗಂಡು ಮಗು’ ಔಷಧಿ ಹೆಸರಿನಲ್ಲಿ ವಂಚನೆ"ನಾನೂ ಸಚಿವ ಸ್ಥಾನದಿಂದ ವಂಚಿತನಾಗಿದ್ದೆ": ಅಸಮಾಧಾನಿತ ಶಾಸಕರಿಗೆ ಡಿ.ಕೆ.ಶಿವಕುಮಾರ ಸಮಾಧಾನಡಿ.ಕೆ. ಸಂಪುಟ ವಿಸ್ತರಣೆ : 19 ಸಚಿವರ ಪ್ರಮಾಣ ವಚನ, ಮಹಿಳೆಯರಿಗೆ ಸಿಗಲಿಲ್ಲ ಅವಕಾಶ ರಾಮಮಂದಿರ ದೇಣಿಗೆ ಕಳ್ಳತನ, ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ : ಸಂಸತ್ ಆವರಣದಲ್ಲಿ ವಿರೋಧ ಪಕ್ಷಗಳ ಪ್ರತಿಭಟನೆ