LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಮತ ಚಲಾಯಿಸಲು ಬಂದಿದ್ದ ಇಬ್ಬರ ಸಾವು

ಬೆಳಗಾವಿ, ೧೦- ಬೆಳಗಾವಿ ಹಾಗು ಹಾಸನ ಜಿಲ್ಲೆಯಲ್ಲಿ ಮತ ಚಲಾಯಿಸಲು ಬಂದಿದ್ದ ಇಬ್ಬರು ಮತಗಟ್ಟೆಯಲ್ಲೇ ಅಸುನೀಗಿದ ಘಟನೆಗಳು ಸಂಭವಿಸಿವೆ.



ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಯರಝರವಿ ಗ್ರಾಮದಲ್ಲಿ ಮತ ಚಲಾಯಿಸಲು ಬಂದಿದ್ದ ಮಹಿಳೆಯೊಬ್ಬರು ರಕ್ತದೊತ್ತಡ ಕಡಿಮೆಯಾಗಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಮೃತರನ್ನು 68 ವರುಷದ ಪಾರವ್ವ ಈಶ್ವರ ಸಿದ್ನಾಳ ಎಂದು ಗುರುತಿಸಲಾಗಿದೆ. ಪಾರವ್ವ ತಮ್ಮ‌ ಮತ ಹಕ್ಕು ಚಲಾಯಿಸಲು ಮತಗಟ್ಟೆಗೆ ಬಂದಿದ್ದರು. ಆದರೆ, ಮತದಾನಕ್ಕೂ ಮುನ್ನ ಮತಗಟ್ಟೆ ಆವರಣದಲ್ಲೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.



ಮತಗಟ್ಟೆಯ ಬಳಿಯೇ ಮಹಿಳೆ ಮೃತಪಟ್ಟಿದ್ದರಿಂದ ಕೆಲ ಹೊತ್ತು ಮತದಾನ ಪ್ರಕ್ರಿಯೆಯಲ್ಲಿ ಗೊಂದಲ ಸೃಷ್ಟಿಯಾಗಿತ್ತು. ಕಡಿಮೆ ರಕ್ತದೊತ್ತಡದ ಕಾರಣ ಅವರು ಮೃತ ಪಟ್ಟಿದಾರೆಂದು ತಿಳಿದು ಬಂದಿದೆ.



ಇನ್ನೊಂದು ಘಟನೆಯಲ್ಲಿ ಮತದಾನ ಮಾಡಿ ಹೊರ ಬಮ್ದ ವ್ಯಕ್ತಿ ಮತಗಟ್ಟೆ ಆವರಣದಲ್ಲೇ ಹೃದಯಾಘಾತದಿಂದ ಮೃತಪಟ್ಟ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ಚಿಕ್ಕೋಲೆ ಗ್ರಾಮದಲ್ಲಿ ಗ್ರಾಮದಲ್ಲಿ ನಡೆದಿದೆ. 49 ವರ್ಷದ ಜಯಣ್ಣ ಮೃತರು. ಮತದಾನ ಮಾಡಿ ಹೊರ ಬರುತ್ತಿದ್ದಂತೆ ಜಯಣ್ಣ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಮತಗಟ್ಟೆ ಆವರಣದಲ್ಲಿಯೇ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ2027ರಿಂದ ಕಂಪ್ಯೂಟರ್‌ ಆಧಾರಿತ ನೀಟ್‌ ಪರೀಕ್ಷೆಅದಾನಿ ಉಳಿಸಲು ಅಮೇರಿಕದೊಂದಿಗೆ ರಾಜಿ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಯುಎಇ ಸೇರಿ 5 ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಪ್ರವಾಸಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಹಿಂಪಡೆಯಲು ಸಿದ್ದರಾಮಯ್ಯ ಒತ್ತಾಯಜಾಮೀನು ನಿರಾಕರಣೆ: ನಟ ದರ್ಶನ್‌ಗೆ ಜೈಲೇ ಗತಿಭಾರಿ ಗಾಳಿ-ಮಳೆಗೆ ಮನೆ ಗೋಡೆ ಕುಸಿತ: ಒಂದೇ ಕುಟುಂಬದ 4 ಮಂದಿ ಸಾವು