LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಜೀಪ್-ಟ್ರ್ಯಾಕ್ಟರ್ ಡಿಕ್ಕಿ;‌ ಯಲ್ಲಮ್ಮ ದೇವಸ್ಥಾನದಿಂದ ಮರಳುತ್ತಿದ್ದ ಇಬ್ಬರ ಸಾವು

ವಿಜಯಪುರ: ಗುರುವಾರ ರಾತ್ರಿ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಬಬಲಾದಿ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿ ಇಬ್ಬರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ.



ಕಟ್ಟಿಗೆ ಸಾಗಣೆ ಮಾಡುತ್ತಿದ್ದ ಟ್ರ್ಯಾಕ್ಟರ್ ಹಾಗೂ ಕ್ರೂಸರ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಕ್ರೂಸರ್ ನಲ್ಲಿದ್ದ ಇಬ್ಬರು ಸಾವಿಗೀಡಾಗಿದ್ದಾರೆ.



ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ನಂತರ ಕ್ರೂಸರ್ ಮರಕ್ಕೆ ಡಿಕ್ಕಿ ಹೊಡೆದಿದ್ದು, ಅದರಲ್ಲಿದ್ದ 14 ವರುಷದ ರೇವಣಸಿದ್ದ ಜಾತಗೊಂಡ ಮತ್ತು 27 ವರುಷದ ಅಮಸಿದ್ದ ಬಂಡೆ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಯಲ್ಲಮ್ಮ ದೇವಿಯ ದರ್ಶನ ಮಾಡಿಕೊಂಡು ವಾಪಸ್ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.



ಹೊರ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST