LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

ಕೆಎಸ್ ಆರ್ ಟಿಸಿ ಬಸ್ ಗಳಲ್ಲಿ ಯುಪಿಐ ಸೇವೆ ಆರಂಭ

ಹುಬ್ಬಳ್ಳಿ, ೧- ಸಾರ್ವಜನಿಕ ಸಾರಿಗೆಯನ್ನು ಮತ್ತಷ್ಟು ಪ್ರಯಾಣಿಕ ಸ್ನೇಹಿಯಾಗಿಸಲು ಹಾಗೂ ನಗದು ರಹಿತ ವ್ಯವಹಾರವನ್ನು ಉತ್ತೇಜಿಸುವ ನಿಟ್ಟಿನಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸಂಸ್ಥೆಯ ಬಸ್ಸುಗಳಲ್ಲಿ ಯುಪಿಐ ಮೂಲಕ ಟಿಕೆಟ್ ಪಡೆಯುವ ವ್ಯವಸ್ಥೆಯನ್ನು ಪ್ರಾರಂಭಿಸಲಾಗಿದೆ.



ವಾ.ಕ.ರ.ಸಾ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಭರತ್ ಎಸ್. ರವರ ಮಾರ್ಗದರ್ಶನದಲ್ಲಿ ಯುಪಿಐ ಮೂಲಕ ಹಣ ಪಾವತಿಸಿ ಪ್ರಯಾಣದ ಟಿಕೆಟ್ ಪಡೆಯುವ ವ್ಯವಸ್ಥೆಯನ್ನು ಜಾರಿಗೊಳಿಸಲಾಗುತ್ತಿದೆ. ನಗರದ ಗೋಕುಲ ರಸ್ತೆಯಲ್ಲಿರುವ ಹೊಸ ಬಸ್ ನಿಲ್ದಾಣದಲ್ಲಿ ಹಿರಿಯ ಅಧಿಕಾರಿಗಳು ಯಪಿಐ ವ್ಯವಸ್ಥೆಗೆ ಚಾಲನೆ ನೀಡಿದರು.



ಮುಖ್ಯ ಸಂಚಾರ ವ್ಯವಸ್ಥಾಪಕ ರಾಜೇಶ ಹುದ್ದಾರ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಎಲ್ಲ ಕ್ಷೇತ್ರಗಳಲ್ಲಿ ನಗಲು ರಹಿತ ವ್ಯವಹಾರವನ್ನು ಉತ್ತೇಜಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಟಿಕೆಟ್ ಪಡೆಯಲು ನಗರವನ್ನು ನಗದು ರಹಿತ ಹಣ ಪಾವತಿ ವ್ಯವಸ್ಥೆಯನ್ನು ಆರಂಭಿಸಲಾಗಿದೆ. ಚಿಲ್ಲರೆ ಸಮಸ್ಯೆ ಪರಿಹಾರ, ಸಮಯದ ಉಳಿತಾಯ ಹಾಗೂ ಪ್ರಯಾಣದಲ್ಲಿ ನಗದು ತೆಗೆದು ಕೊಂಡು ಹೋಗಬೇಕಾದ ಅವಶ್ಯಕತೆ ಇರುವುದಿಲ್ಲ. ಇದರಿಂದ ಪ್ರಯಾಣಿಕರಿಗೆ ಹಾಗೂ ನಿರ್ವಾಹಕರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ತಿಳಿಸಿದರು.



ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ 4,830 ಬಸ್ಸುಗಳಿದ್ದು 4,359 ಅನುಸೂಚಿಗಳ ಮೂಲಕ ಪ್ರತಿದಿನ 15 ಲಕ್ಷ ಕಿಲೋ ಮೀಟರ್ ಕಾರ್ಯಾಚರಣೆ ಮಾಡಲಾಗುತ್ತಿದೆ. ಶಕ್ತಿ ಯೋಜನೆಗೆ ಮೊದಲು ನಿತ್ಯ 17.48 ಲಕ್ಷ ಜನರು ಪ್ರಯಾಣ ಮಾಡುತ್ತಿದ್ದರು. ಶಕ್ತಿ ಯೋಜನೆ ಜಾರಿಯಾದ ನಂತರ ಪ್ರಯಾಣಿಕರ ಸಂಖ್ಯೆ 24 ರಿಂದ 26 ಲಕ್ಷಕ್ಕೆ ಹೆಚ್ಚಳವಾಗಿದೆ.



ಆರಂಭದಲ್ಲಿ ಪ್ರಾಯೋಗಿಕವಾಗಿ ಹುಬ್ಬಳ್ಳಿ ಗ್ರಾಮಾಂತರ 3ನೇ ಡಿಪೋ ಬಸ್ಸುಗಳಲ್ಲಿ ಈ ವ್ಯವಸ್ಥೆಯನ್ನು ಅಳವಡಿಸಲಾಗಿದೆ.ಇದರ ಸಾಧಕ-ಬಾಧಕಗಳು ಹಾಗೂ ಸಾರ್ವಜನಿಕ ಪ್ರಯಾಣಿಕರ ಪ್ರತಿಕ್ರಿಯೆ ಗಮನಿಸಿ ಇತರೆ ಬಸ್ಸುಗಳಿಗೆ ವಿಸ್ತರಿಸಲು ಯೋಜಿಸಲಾಗಿದೆ ಎಂದು ಮಾಹಿತಿ ತಂತ್ರಜ್ಞಾನ ಇಲಾಖೆ ಮುಖ್ಯಸ್ಥ ಹಾಗೂ ಸಾರ್ವಜನಿಕ ಸಂಪರ್ಕಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ.



ಮುಖ್ಯ ಕಾರ್ಮಿಕ ಕಲ್ಯಾಣ ಅಧಿಕಾರಿ ಶಶಿಧರ ಕುಂಬಾರ, ಹುಬ್ಬಳ್ಳಿ ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ ಟಿ.ಎಲ್.ಶ್ರೀನಾಥ ಮತ್ತಿತರರು ಇದ್ದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ