LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಕರಾವಳಿಯಲ್ಲಿ ವರುಣನ ಅಬ್ಬರ

ಬೆಂಗಳೂರು, ಜುಲೈ 28: ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕಳೆದ 24 ಗಂಟೆಗಳಲ್ಲಿ ಉತ್ತಮ ಮಳೆಯಾಗಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಹಲವು ಪ್ರದೇಶಗಳು ಭಾರಿ ಮಳೆಗೆ ಸಾಕ್ಷಿಯಾಗಿವೆ. ಆದರೆ, ಉತ್ತಮ ಮಳೆಯ ನಿರೀಕ್ಷೆಯಿದ್ದ ಕೊಡಗು ಜಿಲ್ಲೆಯಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದ್ದು, ಬೆಂಗಳೂರು ನಗರ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಮಳೆಯೇ ದಾಖಲಾಗಿಲ್ಲ.

ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ಬಿಡುಗಡೆ ಮಾಡಿರುವ ವರದಿ ಪ್ರಕಾರ, ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ನಾಗರಬಸ್ತಿಕೇರಿಯಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು 102 ಮಿ.ಮೀ. ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ದೇವಚಳ್ಳ ಹಾಗೂ ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ನೀರೆ ಪ್ರದೇಶಗಳಲ್ಲಿ ತಲಾ 99 ಮಿ.ಮೀ. ಮಳೆಯಾಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆಯಲ್ಲಿ 81.2 ಮಿ.ಮೀ. ಮಳೆ ದಾಖಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲ್ಲೂಕಿನ ಕಿಗ್ಗದಲ್ಲಿ 52 ಮಿ.ಮೀ., ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹೊಗಡಹಳ್ಳಿಯಲ್ಲಿ 44 ಮಿ.ಮೀ., ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಬುಗಟೆ ಆಲೂರುನಲ್ಲಿ 43.5 ಮಿ.ಮೀ. ಹಾಗೂ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಬಿರುನಾಣಿಯಲ್ಲಿ 43 ಮಿ.ಮೀ. ಮಳೆಯಾಗಿದೆ.

ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ಅಲ್ಲಲ್ಲಿ ಸಾಧಾರಣ ಮಳೆಯಾಗಿದೆ. ಕಲಬುರಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಮಾರಗುತ್ತಿಯಲ್ಲಿ 39.5 ಮಿ.ಮೀ., ಬೀದರ್ ಜಿಲ್ಲೆಯ ಚಿಟಗುಪ್ಪ ತಾಲ್ಲೂಕಿನ ಚಂಗಳೇರದಲ್ಲಿ 28.5 ಮಿ.ಮೀ. ಹಾಗೂ ಧಾರವಾಡ ಜಿಲ್ಲೆಯ ಕಲಘಟಗಿ ತಾಲ್ಲೂಕಿನ ತುಂಬೂರುನಲ್ಲಿ 23 ಮಿ.ಮೀ. ಮಳೆಯಾಗಿದೆ.

ಯಾದಗಿರಿ ಜಿಲ್ಲೆಯ ಹಲಿಗೇರ ಮತ್ತು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ತಲಾ 11.2 ಮಿ.ಮೀ., ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಸಮ್ಮಸಗಿಯಲ್ಲಿ 11 ಮಿ.ಮೀ. ಹಾಗೂ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಕಗತೂರುನಲ್ಲಿ 10 ಮಿ.ಮೀ. ಮಳೆಯಾಗಿದೆ.

ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಮಿರಗಿಯಲ್ಲಿ 7.5 ಮಿ.ಮೀ., ಚಿತ್ರದುರ್ಗ ಜಿಲ್ಲೆಯ ಅಳಗವಾಡಿಯಲ್ಲಿ 7 ಮಿ.ಮೀ., ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ 5.8 ಮಿ.ಮೀ., ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ 5.2 ಮಿ.ಮೀ. ಹಾಗೂ ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆ ತಾಲ್ಲೂಕಿನ ಡಿ.ಬಿ. ಕುಪ್ಪೆ ಮತ್ತು ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ವಂದರಗುಪ್ಪೆಯಲ್ಲಿ ತಲಾ 4 ಮಿ.ಮೀ. ಮಳೆಯಾಗಿದೆ.

ಗದಗ ಜಿಲ್ಲೆಯ ಚಿಕ್ಕಹಂದಿಗೋಳದಲ್ಲಿ 3.5 ಮಿ.ಮೀ., ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ 3 ಮಿ.ಮೀ., ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಬಿಜಿಪುರ ಹಾಗೂ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಅಳಿಲುಘಟ್ಟದಲ್ಲಿ ತಲಾ 3 ಮಿ.ಮೀ. ಮಳೆಯಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಕಡಲವೇಣಿಯಲ್ಲಿ 2.5 ಮಿ.ಮೀ., ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ 1 ಮಿ.ಮೀ. ಹಾಗೂ ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಹರವಿ ಮತ್ತು ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲ್ಲೂಕಿನ ಅರಕೆರೆಯಲ್ಲಿ ತಲಾ 0.5 ಮಿ.ಮೀ. ಮಳೆಯಾಗಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ