LIVE TV LocalCrimeNationalInternationalPoliticsBusinessFinancialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಶಂಕರ ಬಿದರಿ ವಜಾಕ್ಕೆ ವೀರಶೈವ ಮಹಾಸಭೆ ಒತ್ತಾಯ

ಬೆಂಗಳೂರು, ನ. 20: ಬಸವಣ್ಣನವರ ಕುರಿತು ಅವಹೇಳನಕಾರಿ ಅಂಶಗಳಿವೆ ಎಂಬ ಆರೋಪ ಎದುರಿಸುತ್ತಿರುವ ‘ಬಸವ ಮಂಟಪ’ ಕೃತಿಯ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ಲೇಖಕ ರವಿ ಹಂಜ್ ಅವರನ್ನು ಅಭಿನಂದಿಸಿರುವ ಶಂಕರ ಬಿದರಿ ಅವರನ್ನು ಅಖಿಲ ಭಾರತ ವೀರಶೈವ ಮಹಾಸಭೆಯ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸುವಂತೆ ಮಹಾಸಭೆಯ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.

ಈ ಕುರಿತು ಸಚಿವ ಈಶ್ವರ ಖಂಡ್ರೆ ಅವರಿಗೆ ಮನವಿ ಸಲ್ಲಿಸಿರುವ ಅವರು, ಶಂಕರ ಬಿದರಿ ಅವರ ವರ್ತನೆಯಿಂದ ಮಹಾಸಭೆಯ ಘನತೆಗೆ ಧಕ್ಕೆಯಾಗಿದೆ ಎಂದು ಆರೋಪಿಸಿದ್ದಾರೆ.

‘ಕೃತಿಯ ಹಿನ್ನೆಲೆ ಹಾಗೂ ಅದರಲ್ಲಿರುವ ವಿಚಾರಗಳನ್ನು ಸಮರ್ಪಕವಾಗಿ ಅರಿಯದೆ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ, ಲೇಖಕರನ್ನು ಮಹಾಸಭೆಯ ಪರವಾಗಿ ಅಭಿನಂದಿಸಿರುವುದು ಬೇಜವಾಬ್ದಾರಿಯುತ ನಡೆ. ವೈಯಕ್ತಿಕ ಹಿತಾಸಕ್ತಿಗೆ ಆದ್ಯತೆ ನೀಡಿ ಸಂಘಟನೆಯ ಗೌರವಕ್ಕೆ ಕುಂದು ತಂದಿದ್ದಾರೆ’ ಎಂದು ಟೀಕಿಸಿದ್ದಾರೆ.

ರಾಜ್ಯ ಘಟಕದ ಅಧ್ಯಕ್ಷರಾದ ಬಳಿಕ ಸಂಘಟನೆಯ ಬೆಳವಣಿಗೆಗೆ ಆದ್ಯತೆ ನೀಡುವ ಬದಲು ವಿವಾದಾತ್ಮಕ ವಿಷಯಗಳಲ್ಲಿ ತೊಡಗಿಸಿಕೊಂಡು ಮಹಾಸಭೆಗೆ ಹಾನಿ ಉಂಟುಮಾಡುತ್ತಿದ್ದಾರೆ. ಹೀಗಾಗಿ ಅವರನ್ನು ತಕ್ಷಣ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಶಂಕರ ಬಿದರಿ ವಿರುದ್ಧ ಕ್ರಮ ಕೈಗೊಳ್ಳಲು ವಿಳಂಬವಾದರೆ ಮಹಾಸಭೆಯ ವಿರುದ್ಧವೇ ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಎಚ್ಚರಿಸಿದ್ದಾರೆ.

‘ಬಸವ ಮಂಟಪ’ ಕೃತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವುದಷ್ಟೇ ಸಾಲದು. ಪುಸ್ತಕದಲ್ಲಿರುವ ಲೇಖನಗಳು ಈ ಹಿಂದೆ ವಿಶ್ವವಾಣಿ ದಿನಪತ್ರಿಕೆಯ ಅಂಕಣಗಳಲ್ಲಿ ಪ್ರಕಟವಾಗಿವೆ. ಅವು ಸಮಾಜದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಮಹಾಸಭೆಯ ಪದಾಧಿಕಾರಿಗಳು ಆರೋಪಿಸಿದ್ದಾರೆ.

ಹೀಗಾಗಿ ವಿಶ್ವವಾಣಿ ದಿನಪತ್ರಿಕೆಯ ಸಂಪಾದಕರು ಹಾಗೂ ಪತ್ರಿಕೆಯ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST