LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ವಿಜಯಪುರ ಜಮೀನು ವಿವಾದ: ಗುಂಡಿನ ದಾಳಿ ನಡೆಸಿ, ಕೊಚ್ಚಿ 6 ಮಂದಿಯ ಭೀಕರ ಹತ್ಯೆ

ವಿ

ವಿಜಯಪುರ, ಮೇ 30 : ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಸದಸ್ಯರು ಸೇರಿದಂತೆ 6 ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹಾಗೂ ಗುಂಡು ಹಾರಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

ಭೀಮಾ ತೀರ ಪ್ರದೇಶವನ್ನು ಬೆಚ್ಚಿಬೀಳಿಸಿರುವ ಈ ಹತ್ಯಾಕಾಂಡಕ್ಕೆ ಜಮೀನು ವಿವಾದವೇ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ನಿರಾಳೆ ಮತ್ತು ಗೊಳಗಿ ಕುಟುಂಬಗಳ ನಡುವೆ ಹಲವು ವರ್ಷಗಳಿಂದ ಆಸ್ತಿ ಹಾಗೂ ಜಮೀನು ಸಂಬಂಧಿತ ವ್ಯಾಜ್ಯ ನಡೆಯುತ್ತಿತ್ತು ಎನ್ನಲಾಗಿದೆ.

ವಿವಾದ ತೀವ್ರ ಸ್ವರೂಪ ಪಡೆದ ಪರಿಣಾಮ ಮಾರಕಾಸ್ತ್ರಗಳು ಹಾಗೂ ಬಂದೂಕು ಬಳಸಿಕೊಂಡು ದಾಳಿ ನಡೆಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ದಾಳಿಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಮೃತರ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಆತಂಕ ವ್ಯಕ್ತವಾಗಿದೆ.

ಘಟನೆಯಲ್ಲಿ ರೇವಣಸಿದ್ದಪ್ಪ ನಿರಾಳೆ, ದುಂಡಪ್ಪ ರೇವಣಸಿದ್ದಪ್ಪ ನಿರಾಳೆ, ಶಿವಪುತ್ರ ರೇವಣಸಿದ್ದಪ್ಪ ನಿರಾಳೆ, ಚಂದ್ರಶೇಖರ ನಿರಾಳೆ ಹಾಗೂ ಶಬ್ಬೀರ ನದಾಫ ಮೃತಪಟ್ಟಿರುವುದು ದೃಢಪಟ್ಟಿದೆ. ಮತ್ತೊಬ್ಬ ಮೃತರ ಗುರುತು ಪತ್ತೆ ಮಾಡುವ ಕಾರ್ಯ ಮುಂದುವರಿದಿದೆ.

ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆ ಹಾಗೂ ಬಂಧನಕ್ಕಾಗಿ ವಿಶೇಷ ಕಾರ್ಯಾಚರಣೆ ಆರಂಭಿಸಿದ್ದಾರೆ. ಆಸ್ತಿ ವಿವಾದವೇ ಹತ್ಯೆಗೆ ನೇರ ಕಾರಣವೇ ಅಥವಾ ಬೇರೆ ಯಾವುದೇ ಕಾರಣಗಳಿವೆಯೇ ಎಂಬ ಕುರಿತು ತನಿಖೆ ಮುಂದುವರಿದಿದೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಈ ಬಾರಿಯ ಮುಂಗಾರು ದುರ್ಬಲ, ವಾಡಿಕೆಗಿಂತ ಕಡಿಮೆ ಮಳೆ ಸಾಧ್ಯತೆ3 ತಿಂಗಳಲ್ಲಿ ತೀರ್ಪು ಪ್ರಕಟಿಸಿ: ಎಲ್ಲ ಹೈಕೋರ್ಟಗಳಿಗೆ ಸುಪ್ರೀಮ ಕೋರ್ಟ ನಿರ್ದೇಶನನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಆಘಾತಕಾರಿ: ಸುಪ್ರೀಮ ಕೋರ್ಟ ಅಸಮಾಧಾನವಿಜಯಪುರ ಜಮೀನು ವಿವಾದ: ಗುಂಡಿನ ದಾಳಿ ನಡೆಸಿ, ಕೊಚ್ಚಿ 6 ಮಂದಿಯ ಭೀಕರ ಹತ್ಯೆಸಿದ್ದರಾಮಯ್ಯರ ರಾಜಕೀಯ ಪಯಣ ಮುಂದಿನ ಪೀಳಿಗೆಗೆ ಸ್ಫೂರ್ತಿ: ಪ್ರಿಯಾಂಕ ಖರ್ಗೆಕೋಮು ಗಲಭೆ ತಡೆಯಲು ಸಿದ್ದರಾಮಯ್ಯ ನೀಡಿದ್ದ ಸೂಚನೆ ನೆನೆದ ಸೆಂಥಿಲ್ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ ಫೋಗಟ್‌ಗೆ ಸುಪ್ರೀಮ ಕೋರ್ಟ ಅನುಮತಿನ್ಯಾಯಾಂಗದಲ್ಲಿಯೂ ಭ್ರಷ್ಟಾಚಾರ ಇದೆ ಮತ್ತು ನ್ಯಾಯಾಧೀಶರನ್ನು ಪವಿತ್ರ ಗೋವುಗಳಂತೆ ಪರಿಗಣಿಸಬೇಕಿಲ್ಲ : ಮದ್ರಾಸ ಹೈಕೋರ್ಟಎಸಿ ಸ್ಫೋಟ : ಸಿಸಿಐ ಮಾಜಿ ಅಧ್ಯಕ್ಷ ಧನೇಂದ್ರ ಕುಮಾರ ಸಾವುಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷರಾಗಲಿ ಎಂದು ಗೋಕಾಕದಲ್ಲಿ ವಿಶೇಷ ಪೂಜೆ