LIVE TV LocalCrimeNationalInternationalPoliticsBusinessFinancialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
International News

ಬಾಂಗ್ಲಾದೇಶದಲ್ಲಿ ಮತ್ತೆ ಹಿಂಸಾಚಾರ: ನಾಲ್ವರ ಸಾವು

ಯೂನಸ್‌ ಮನೆ, ಗ್ರಾಮೀಣ ಬ್ಯಾಂಕ್‌ ಶಾಖೆಗಳಿಗೆ ಬೆಂಕಿ; 565 ಮಂದಿ ಬಂಧನ

news_1795093892_0_652.webp

ಢಾಕಾ, ನ. 19: ಬಾಂಗ್ಲಾದೇಶದಲ್ಲಿ ರಾಜಕೀಯ ಹಿಂಸಾಚಾರ ಮತ್ತೆ ಭುಗಿಲೆದ್ದಿದ್ದು, ಮಾಜಿ ಮಧ್ಯಂತರ ಸರಕಾರದ ಮುಖ್ಯಸ್ಥ ಮುಹಮ್ಮದ್ ಯೂನಸ್ ಅವರ ಪೂರ್ವಜರ ಮನೆ ಹಾಗೂ ಗ್ರಾಮೀಣ ಬ್ಯಾಂಕ್‌ನ ಹಲವು ಶಾಖೆಗಳಿಗೆ ಬೆಂಕಿ ಹಚ್ಚಲಾಗಿದೆ. ದೇಶದ ವಿವಿಧೆಡೆ ನಡೆದ ಘರ್ಷಣೆಗಳಲ್ಲಿ ಕನಿಷ್ಠ ನಾಲ್ವರು ಮೃತಪಟ್ಟಿದ್ದಾರೆ.

ಅವಾಮಿ ಲೀಗ್ ಕರೆ ನೀಡಿರುವ ಪ್ರತಿಭಟನೆ ಹಾಗೂ ಬಂದ್ ಹಿನ್ನೆಲೆಯಲ್ಲಿ ದೇಶಾದ್ಯಂತ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜಧಾನಿ ಢಾಕಾ ಸೇರಿದಂತೆ ಹಲವು ಪ್ರದೇಶಗಳಲ್ಲಿ ಕಚ್ಚಾ ಬಾಂಬ್‌ಗಳು ಸ್ಫೋಟಗೊಂಡಿದ್ದು, ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಸ್ಫೋಟಗಳಲ್ಲಿ ಕನಿಷ್ಠ ನಾಲ್ವರು ಗಾಯಗೊಂಡಿದ್ದಾರೆ.

ಢಾಕಾದಲ್ಲಿ ಪೊಲೀಸರು ನಡೆಸಿದ 24 ಗಂಟೆಗಳ ವಿಶೇಷ ಕಾರ್ಯಾಚರಣೆಯಲ್ಲಿ 565 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಮಾಜಿ ಶಿಕ್ಷಣ ಸಚಿವ ನೂರುಲ್ ಇಸ್ಲಾಂ ನಾಹಿದ್ ಕೂಡ ಸೇರಿದ್ದಾರೆ. ಹಿಂಸಾಚಾರದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಸಲಾಹುದ್ದೀನ್ ಅಹ್ಮದ್ ಎಚ್ಚರಿಸಿದ್ದಾರೆ.

ಯೂನಸ್ ಮನೆಗೆ ಬೆಂಕಿ

ಚಿತ್ತಗಾಂಗ್‌ನ ಪಂಚ್ಲೈಶ್ ಪ್ರದೇಶದಲ್ಲಿರುವ ಮುಹಮ್ಮದ್ ಯೂನಸ್ ಅವರ ತಂದೆಯ ಮನೆಯ ನೆಲಮಹಡಿಯ ಕೊಠಡಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಮೇಲಿನ ಮಹಡಿಗಳಲ್ಲಿ ಅವರ ಸಹೋದರರ ಕುಟುಂಬಗಳು ವಾಸಿಸುತ್ತಿವೆ ಎಂದು ವರದಿಯಾಗಿದೆ.

ಸಿಲ್ಹೆಟ್, ರಾಜ್‌ಶಾಹಿ, ಬರಿಶಾಲ್ ಹಾಗೂ ಫರೀದ್‌ಪುರದಲ್ಲಿರುವ ಗ್ರಾಮೀಣ ಬ್ಯಾಂಕ್ ಶಾಖೆಗಳ ಮೇಲೂ ಬೆಂಕಿ ಹಚ್ಚುವ ದಾಳಿಗಳು ನಡೆದಿವೆ.

ಕಳೆದ ಎರಡು ದಿನಗಳಲ್ಲಿ ದೇಶದ 64 ಜಿಲ್ಲೆಗಳ ಪೈಕಿ 28 ಜಿಲ್ಲೆಗಳಲ್ಲಿ ಬಾಂಬ್ ಸ್ಫೋಟ ಹಾಗೂ ಬೆಂಕಿ ಹಚ್ಚುವ ಘಟನೆಗಳು ವರದಿಯಾಗಿವೆ. ಪಶ್ಚಿಮ ನಾರೈಲ್ ಜಿಲ್ಲೆಯಲ್ಲಿ ಮೆರವಣಿಗೆಯೊಂದರ ಮೇಲೆ ನಡೆದ ದಾಳಿಯಲ್ಲಿ ಆಡಳಿತಾರೂಢ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಕ್ಷದ ಇಬ್ಬರು ಸ್ಥಳೀಯ ನಾಯಕರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅವಾಮಿ ಲೀಗ್ ವಿರುದ್ಧ ಪ್ರಧಾನಿ ವಾಗ್ದಾಳಿ

ಸಂಸತ್ತಿನಲ್ಲಿ ಮಾತನಾಡಿದ ಪ್ರಧಾನಿ ರೆಹಮಾನ್, ಅವಾಮಿ ಲೀಗ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರಜಾಪ್ರಭುತ್ವ ಪರ ಶಕ್ತಿಗಳು ಒಗ್ಗಟ್ಟಾಗಿ ಹಿಂಸಾಚಾರವನ್ನು ಎದುರಿಸಬೇಕು ಎಂದು ಕರೆ ನೀಡಿದ್ದಾರೆ.

2024ರ ವಿದ್ಯಾರ್ಥಿ ಪ್ರತಿಭಟನೆಗಳ ಸಂದರ್ಭದಲ್ಲಿ ನಡೆದ ದಮನ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರಿಗೆ ವಿಶೇಷ ನ್ಯಾಯಮಂಡಳಿ ಗೈರುಹಾಜರಿಯಲ್ಲಿ ಮರಣದಂಡನೆ ವಿಧಿಸಿತ್ತು. ಆ ತೀರ್ಪಿಗೆ ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅವಾಮಿ ಲೀಗ್ ಪ್ರತಿಭಟನೆಗೆ ಕರೆ ನೀಡಿದೆ.

2024ರ ಆಗಸ್ಟ್‌ನಲ್ಲಿ ಭಾರತಕ್ಕೆ ತೆರಳಿರುವ ಹಸೀನಾ ಅವರನ್ನು ಹಸ್ತಾಂತರಿಸುವಂತೆ ಬಾಂಗ್ಲಾದೇಶ ಸರಕಾರ ಒತ್ತಾಯಿಸುತ್ತಿದೆ. ಈ ಬೆಳವಣಿಗೆಗಳ ನಡುವೆ ದೇಶದಲ್ಲಿ ರಾಜಕೀಯ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST