LIVE TV LocalCrimeNationalInternationalPoliticsFinancialEducationTechnologyEntertainmentSportsHealthFeatureTravelingBeautyRecipes
National News

ಜಲವಿದ್ಯುತ್ ಯೋಜನೆ ವಿರೋಧಿಸಿ ಅರುಣಾಚಲದಲ್ಲಿ ಹಿಂಸಾಚಾರ: ಭದ್ರತಾ ಪಡೆಯ ಎರಡು ತುಕಡಿ ರವಾನೆ

ಇಟಾನಗರ, ಅ.25: ಅರುಣಾಚಲ ಪ್ರದೇಶದಲ್ಲಿ 11,200 ಮೆಗಾವ್ಯಾಟ್ ಸಾಮರ್ಥ್ಯದ ಬೃಹತ್ ಜಲವಿದ್ಯುತ್ ಯೋಜನೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಪರಿಸ್ಥಿತಿ ನಿಯಂತ್ರಿಸಲು ಕೇಂದ್ರ ಸರ್ಕಾರ ಕ್ಷಿಪ್ರ ಕಾರ್ಯಾಚರಣೆ ಪಡೆಯ ಎರಡು ತುಕಡಿಗಳನ್ನು ತುರ್ತಾಗಿ ರವಾನಿಸಿದೆ.

ಪೂರ್ವ ಸಿಯಾಂಗ್ ಜಿಲ್ಲೆಯ ಪಾಸಿಘಾಟ್‌ನಲ್ಲಿ ಪ್ರತಿಭಟನಾಕಾರರು ಮತ್ತು ಭದ್ರತಾ ಪಡೆಗಳ ನಡುವೆ ಘರ್ಷಣೆ ಸಂಭವಿಸಿದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ಹೆಚ್ಚುವರಿ ಪಡೆಗಳ ನಿಯೋಜನೆಗೆ ಆದೇಶಿಸಿದೆ. ನವಿ ಮುಂಬೈನಿಂದ ಪಡೆಯನ್ನು ಭಾರತೀಯ ವಾಯುಪಡೆಯ ವಿಶೇಷ ವಿಮಾನದ ಮೂಲಕ ಅರುಣಾಚಲ ಪ್ರದೇಶಕ್ಕೆ ಕಳುಹಿಸಲಾಗಿದೆ.

ಪ್ರಸ್ತಾವಿತ ಸಿಯಾಂಗ್ ಅಪ್ಪರ್ ಬಹುಉದ್ದೇಶಿತ ಜಲವಿದ್ಯುತ್ ಯೋಜನೆಯನ್ನು ವಿರೋಧಿಸಿ ಶುಕ್ರವಾರ ಸಿಯಾಂಗ್, ಅಪ್ಪರ್ ಸಿಯಾಂಗ್ ಹಾಗೂ ಪೂರ್ವ ಸಿಯಾಂಗ್ ಜಿಲ್ಲೆಗಳಲ್ಲಿ 12 ಗಂಟೆಗಳ ಬಂದ್ ನಡೆಸಲಾಗಿತ್ತು. ಹಗಲಿನಲ್ಲಿ ಬಹುತೇಕ ಶಾಂತಿಯುತವಾಗಿದ್ದ ಪ್ರತಿಭಟನೆ ರಾತ್ರಿ ವೇಳೆ ಹಿಂಸಾತ್ಮಕ ಸ್ವರೂಪ ಪಡೆದುಕೊಂಡಿತು.

ಪಾಸಿಘಾಟ್‌ನಲ್ಲಿ ಉದ್ರಿಕ್ತ ಗುಂಪು ರಾಷ್ಟ್ರೀಯ ಜಲವಿದ್ಯುತ್ ನಿಗಮದ ಕಚೇರಿ ಹಾಗೂ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದೆ ಎಂದು ವರದಿಯಾಗಿದೆ. ರಾಜ್ಯ ಬಿಜೆಪಿ ಅಧ್ಯಕ್ಷರು ಸೇರಿದಂತೆ ಮೂವರು ರಾಜಕೀಯ ಮುಖಂಡರ ಮನೆಗಳ ಮೇಲೂ ದಾಳಿ ನಡೆಸಿ ಆಸ್ತಿಪಾಸ್ತಿಗೆ ಹಾನಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘರ್ಷಣೆಯಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆ ಹಾಗೂ ರಾಜ್ಯ ಪೊಲೀಸ್ ಇಲಾಖೆಯ ಹಲವು ಸಿಬ್ಬಂದಿ ಗಾಯಗೊಂಡಿದ್ದಾರೆ. ಪರಿಸ್ಥಿತಿ ಮತ್ತಷ್ಟು ಹದಗೆಡದಂತೆ ತಡೆಯಲು ಈಗಾಗಲೇ ನಿಯೋಜಿಸಲಾಗಿರುವ ಭದ್ರತಾ ಪಡೆಗಳೊಂದಿಗೆ ಹೆಚ್ಚುವರಿ ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ.

ಹಿಂಸಾಚಾರದ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಪೆಮಾ ಖಂಡು, ಪ್ರಜಾಪ್ರಭುತ್ವದಲ್ಲಿ ಪ್ರತಿಭಟಿಸುವ ಹಕ್ಕು ಪ್ರತಿಯೊಬ್ಬರಿಗೂ ಇದೆ. ಆದರೆ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡುವುದನ್ನು ಸಹಿಸಲಾಗದು ಎಂದು ತಿಳಿಸಿದ್ದಾರೆ.

ಯೋಜನೆ ವಿರೋಧಿಸುವವರು ಶಾಂತಿಯುತವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಬೇಕು. ಸಮಾಜದ ಎಲ್ಲ ವರ್ಗದ ಜನರು ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

ಶುಕ್ರವಾರ ರಾತ್ರಿ ಆರಂಭವಾದ ಹಿಂಸಾಚಾರ ಶನಿವಾರ ಮುಂಜಾನೆ 3.30ರವರೆಗೂ ಮುಂದುವರಿದಿತ್ತು. ಮತ್ತೆ ಅಹಿತಕರ ಘಟನೆಗಳು ಸಂಭವಿಸದಂತೆ ಪಾಸಿಘಾಟ್ ಸೇರಿದಂತೆ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡಿಗರಿಗೆ ಉದ್ಯೋಗ ನಿರಾಕರಿಸಿದರೆ ಖಾಸಗಿ ಸಂಸ್ಥೆಗಳ ವಿರುದ್ಧ ಕ್ರಮ: ಡಿ.ಕೆ. ಶಿವಕುಮಾರಜಲವಿದ್ಯುತ್ ಯೋಜನೆ ವಿರೋಧಿಸಿ ಅರುಣಾಚಲದಲ್ಲಿ ಹಿಂಸಾಚಾರ: ಭದ್ರತಾ ಪಡೆಯ ಎರಡು ತುಕಡಿ ರವಾನೆಸಾಹಿಲ್ ಸಾವಿನ ಪ್ರಕರಣ: ಐಐಟಿ ಬಾಂಬೆ ನಿರ್ದೇಶಕರ ರಾಜೀನಾಮೆಗೆ 84 ಸಂಘಟನೆಗಳ ಆಗ್ರಹಯುರೋಪ್‌ನ ಹಲವು ದೇಶಗಳಲ್ಲಿ ಭುಗಿಲೆದ್ದ ಪ್ರತಿಭಟನೆ, ಹಿಂಸಾಚಾರಮತಗಳ್ಳತನ: ಅ.30ರಿಂದ ದೆಹಲಿಯಲ್ಲೇ ಇರುವಂತೆ ಕಾಂಗ್ರೆಸ್ ಸಂಸದರಿಗೆ ಖರ್ಗೆ ಸೂಚನೆಫ್ರಾನ್ಸನಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ: 1,000 ಮಂದಿ ಬಂಧನನ.7ರವರೆಗೆ ರಿಯಾದ, ದಮ್ಮಾಮ ಹಾರಾಟ ರದ್ದುದೀಪಾವಳಿಗೆ ಸ್ಥಳೀಯ ಉತ್ಪನ್ನಗಳ ಖರೀದಿಗೆ ಆದ್ಯತೆ ನೀಡಿ: ಪ್ರಧಾನಿ ಮೋದಿಡಿಸೆಂಬರ್ ಅಂತ್ಯ ಅಥವಾ ಜನವರಿಯಲ್ಲಿ ಜಿಪಂ, ತಾಪಂ ಚುನಾವಣೆ ಸಾಧ್ಯತೆ: ಈಶ್ವರ ಖಂಡ್ರೆಶಾಲಿನಿ ರಜನೀಶ ಸೇರಿ 6 ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳ ವಿರುದ್ಧ ಹಕ್ಕುಚ್ಯುತಿ ಕ್ರಮಕ್ಕೆ ಆಗ್ರಹ