ಹೊಸದಿಲ್ಲಿ, ಜುಲೈ 20: ಜಂತರ್ ಮಂತರ್‌ನಲ್ಲಿ ಪ್ರತಿಭಟನಾಕಾರರ ಮೇಲೆ ನಡೆದ ಲಾಠಿ ಚಾರ್ಜ್ ಕ್ರಮವನ್ನು ಕಾಂಗ್ರೆಸ್ ಸಂಸದ ಶಶಿ ಥರೂರ ತೀವ್ರವಾಗಿ ಪ್ರಶ್ನಿಸಿದ್ದಾರೆ.
"ಅಹಿಂಸಾತ್ಮಕ ಪ್ರತಿಭಟನೆ ನಡೆಯುತ್ತಿರುವಾಗ ಲಾಠಿ ಚಾರ್ಜ್‌ಗೆ ಕಾರಣವೇನು? ಲಾಠಿ ಚಾರ್ಜ ಅಹಿಂಸೆಯ ಕ್ರಮವಲ್ಲ, ಅದು ಹಿಂಸೆಯ ಕೃತ್ಯ. ಇದರ ಹಿಂದಿನ ತರ್ಕ ನನಗೆ ಅರ್ಥವಾಗುತ್ತಿಲ್ಲ. ಶಾಂತಿಯುತ ಪ್ರತಿಭಟನೆಯನ್ನು ಬಲಪ್ರಯೋಗದಿಂದ ಹತ್ತಿಕ್ಕುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ" ಎಂದು ಅವರು ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಹೇಳಿದ್ದಾರೆ.