LIVE TV LocalCrimeNationalInternationalPoliticsFinancialEducationTechnologyEntertainmentSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಶೂನ್ಯ: ಪ್ರಧಾನಿ ಮೋದಿ ವ್ಯಂಗ್ಯ

ನವದೆಹಲಿ, ಅ.28: ಕರ್ನಾಟಕ ಸೇರಿದಂತೆ ನಾಲ್ಕು ರಾಜ್ಯಗಳ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಕಳಪೆ ಸಾಧನೆಯನ್ನು ಮುಂದಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ವ್ಯಂಗ್ಯವಾಡಿದ್ದಾರೆ. ವಿದ್ಯುನ್ಮಾನ ಮತಯಂತ್ರಗಳ ಬದಲಿಗೆ ಮತಪತ್ರಗಳ ಮೂಲಕ ಚುನಾವಣೆ ನಡೆಸಿದ್ದರೂ ಕಾಂಗ್ರೆಸ್ ಒಂದೇ ಒಂದು ಸ್ಥಾನ ಗೆದ್ದಿಲ್ಲ ಎಂದು ಅವರು ಟೀಕಿಸಿದ್ದಾರೆ.

ಬುಧವಾರ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಮೋದಿ, ಉತ್ತರ ಪ್ರದೇಶ, ಮಹಾರಾಷ್ಟ್ರ, ಬಿಹಾರ ಮತ್ತು ಕರ್ನಾಟಕದ ಒಟ್ಟು 28 ವಿಧಾನ ಪರಿಷತ್ ಸ್ಥಾನಗಳಿಗೆ ಮತಪತ್ರಗಳ ಮೂಲಕ ಚುನಾವಣೆ ನಡೆದಿದೆ. ಈ ಚುನಾವಣೆಗಳಲ್ಲಿ ಕಾಂಗ್ರೆಸ್ ಎಷ್ಟು ಸ್ಥಾನಗಳನ್ನು ಗೆದ್ದಿದೆ ಎಂದು ಊಹಿಸಿ ಎಂದು ಪ್ರಶ್ನಿಸಿದ್ದಾರೆ.

ವಿದ್ಯುನ್ಮಾನ ಮತಯಂತ್ರಗಳ ವಿಶ್ವಾಸಾರ್ಹತೆ ಹಾಗೂ ಚುನಾವಣಾ ಪ್ರಕ್ರಿಯೆಯ ಕುರಿತು ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ನಿರಂತರವಾಗಿ ಆಕ್ಷೇಪಣೆ ವ್ಯಕ್ತಪಡಿಸುತ್ತಿರುವ ಹಿನ್ನೆಲೆಯಲ್ಲಿ ಮೋದಿ ಅವರ ಹೇಳಿಕೆ ಮಹತ್ವ ಪಡೆದುಕೊಂಡಿದೆ.

ಕರ್ನಾಟಕದಲ್ಲಿ ನಡೆದ ನಾಲ್ಕು ವಿಧಾನ ಪರಿಷತ್ ಕ್ಷೇತ್ರಗಳ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಎಲ್ಲ ಸ್ಥಾನಗಳನ್ನು ಗೆದ್ದುಕೊಂಡಿದೆ. ಬಿಜೆಪಿ ಮೂರು ಸ್ಥಾನಗಳನ್ನು ಉಳಿಸಿಕೊಂಡಿದ್ದರೆ, ಜೆಡಿಎಸ್ ಬೆಂಗಳೂರು ಶಿಕ್ಷಕರ ಕ್ಷೇತ್ರವನ್ನು ಕಾಂಗ್ರೆಸ್‌ನಿಂದ ವಶಪಡಿಸಿಕೊಂಡಿದೆ. ಇದರಿಂದ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್‌ಗೆ ಹಿನ್ನಡೆಯಾಗಿದೆ.

ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಎ.ಪಿ. ರಂಗನಾಥ ಅವರು ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಅವರನ್ನು 908 ಮತಗಳ ಅಂತರದಿಂದ ಸೋಲಿಸಿದ್ದಾರೆ. ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯ ಶಶೀಲ ನಮೋಶಿ ಅವರು ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರ ಅವರನ್ನು 3,297 ಮತಗಳಿಂದ ಪರಾಭವಗೊಳಿಸಿದ್ದಾರೆ. ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯ ಎಸ್.ವಿ. ಸಂಕನೂರ ಹಾಗೂ ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಕೆ.ಎಂ. ಸುರೇಶ ಗೆಲುವು ಸಾಧಿಸಿದ್ದಾರೆ.

ಉತ್ತರ ಪ್ರದೇಶದ 11, ಬಿಹಾರದ 8, ಮಹಾರಾಷ್ಟ್ರದ 5 ಹಾಗೂ ಕರ್ನಾಟಕದ 4 ಸ್ಥಾನಗಳು ಸೇರಿದಂತೆ ಒಟ್ಟು 28 ವಿಧಾನ ಪರಿಷತ್ ಸ್ಥಾನಗಳಿಗೆ ಅಕ್ಟೋಬರ್ 23ರಂದು ಮತದಾನ ನಡೆದಿತ್ತು. ಅಕ್ಟೋಬರ್ 27ರಿಂದ ಮತ ಎಣಿಕೆ ಆರಂಭವಾಗಿದ್ದು, ಬುಧವಾರ ಸಂಜೆ ವೇಳೆಗೆ ಕೆಲವು ಕ್ಷೇತ್ರಗಳಲ್ಲಿ ಎಣಿಕೆ ಮುಂದುವರಿದಿತ್ತು.

ಉತ್ತರ ಪ್ರದೇಶದಲ್ಲಿ ಬಿಜೆಪಿ ಮತ್ತು ಸಮಾಜವಾದಿ ಪಕ್ಷ ಹಲವು ಸ್ಥಾನಗಳನ್ನು ಗೆದ್ದಿವೆ. ಬಿಹಾರದಲ್ಲಿ ಪ್ರಶಾಂತ ಕಿಶೋರ್ ನೇತೃತ್ವದ ಜನ ಸುರಾಜ್ ಪಕ್ಷ ಮೊದಲ ಬಾರಿಗೆ ವಿಧಾನ ಪರಿಷತ್ ಪ್ರವೇಶಿಸಿದೆ. ಮಹಾರಾಷ್ಟ್ರದ ಕೆಲವು ಕ್ಷೇತ್ರಗಳ ಫಲಿತಾಂಶ ಇನ್ನೂ ಪ್ರಕಟವಾಗಬೇಕಿತ್ತು. ಈ ಚುನಾವಣೆಗಳು ಸಾಮಾನ್ಯ ವಿಧಾನಸಭಾ ಚುನಾವಣೆಗಳಂತಲ್ಲ. ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳಲ್ಲಿ ನೋಂದಾಯಿತ ಅರ್ಹ ಮತದಾರರು ಮಾತ್ರ ಮತ ಚಲಾಯಿಸುತ್ತಾರೆ. ಇಲ್ಲಿ ವಿದ್ಯುನ್ಮಾನ ಮತಯಂತ್ರಗಳ ಬದಲಿಗೆ ಮತಪತ್ರಗಳನ್ನು ಬಳಸಲಾಗುತ್ತದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಿತ್ತೂರು ಬಳಿ ಭೀಕರ ರಸ್ತೆ ಅಪಘಾತ: ಪತಿ, ಪತ್ನಿ ಹಾಗೂ ಅಳಿಯನ ದುರ್ಮರಣಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಶೂನ್ಯ: ಪ್ರಧಾನಿ ಮೋದಿ ವ್ಯಂಗ್ಯಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ.3ರಷ್ಟು ಹೆಚ್ಚಳ20 ನಿಮಿಷಗಳಲ್ಲಿ ಅಂಬ್ಯುಲೆನ್ಸ್ ತಲುಪದಿದ್ದರೆ ದಂಡ; ಪ್ರತಿ ತಾಲೂಕಿನಲ್ಲಿ 5 ಹಾಸಿಗೆಗಳ ತೀವ್ರ ನಿಗಾ ಘಟಕಪರಿಷತ್ ಚುನಾವಣೆ ಸೋಲು: ಅಧ್ಯಯನ ಮಾಡಿ ತಪ್ಪು ಸರಿಪಡಿಸಿಕೊಳ್ಳುತ್ತೇವೆಸಹಕಾರಿ ಸಂಘಗಳ ಲೆಕ್ಕಪರಿಶೋಧನೆಗೆ 6 ತಿಂಗಳ ಡಿಪ್ಲೊಮಾ ಕೋರ್ಸಎಸ್‌ಐಆರ್ ಕುರಿತು ಕಾಂಗ್ರೆಸ್ ಆರೋಪಗಳಲ್ಲಿ ಹುರುಳಿಲ್ಲ: ಅಶ್ವತ್ಥನಾರಾಯಣಸಕ್ಕರೆ ಎಂಎಸ್‌ಪಿ ಹೆಚ್ಚಳಕ್ಕೆ ಆಗ್ರಹಿಸಿ ಗೋದಾಮುಗಳಿಗೆ ಬೀಗಡಿಸೆಂಬರ್ 7ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಸಾಧ್ಯತೆಎಂಎಸ್‌ಪಿ ಆಧರಿಸಿ ಕಬ್ಬಿಗೆ ದರ: ಡಿ.ಕೆ. ಶಿವಕುಮಾರ